Home ಅಪರಾಧ ಲೋಕ ವೇಣೂರಿನಲ್ಲಿ ಮಹಾ ಮಸ್ತಕಾಭಿಷೇಕ ಸಮಾಲೋಚನಾ ಸಭೆ

ವೇಣೂರಿನಲ್ಲಿ ಮಹಾ ಮಸ್ತಕಾಭಿಷೇಕ ಸಮಾಲೋಚನಾ ಸಭೆ

71
0
ಬೆಳ್ತಂಗಡಿ: ವೇಣೂರಿನಲ್ಲಿ ಫೆ ೨೨ ರಿಂದ ಮಾ 1ರ ವರೆಗೆ ನಡೆಯಲಿರುವ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕದ ಸಿದ್ದತೆಗಳ ಬಗ್ಗೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ಬುಧವಾರ ನಡೆಯಿತು.
ಸಭೆಯಲ್ಲಿ ಶಾಸಕರು ಸಿದ್ದತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದುಕೊಂಡರು.
ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಟ್ರಾಫಿಕ್ ಸಮಸ್ಯೆ ಆಗದಂತೆ ಅಗತ್ಯಕ್ರಮ ಕೈಗೊಳ್ಳುವಂತೆ, ಹೆಚ್ಚುವರಿ ಬಸ್ಸುಗಳನ್ನು ಓಡಿಸುವಂತೆ, ತುರ್ತು ಚಿಕಿತ್ಸಾ ಘಟಕ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಒದಗಿಸುವಂತೆ ಕುಡಿಯುವ ನೀರಿನ, ಶೌಚಾಕಯದ ವ್ಯವಸ್ಥೆ ಗಳನ್ನು ಗಮನಿಸುವಂತೆ ಆದಿಕಾರಿಗಳಿಗೆ ಅವರು ಸೂಚಿಸಿದರು. ಬೆಟ್ಟದ ಸುತ್ತಲಿನ ರಸ್ತೆಯ ಡಾಮರೀಕರಣಕ್ಕರ ಕೂಡಲೇ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು. ವಿವುಧ ಇಲಾಖೆಯ ಅಧಿಕಾರಿಗಳು ಮಾಹಿತಿಗಳನ್ನು ನೀಡಿದರು.
ಸಭೆಯಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಮ್, ವೃತ್ತನಿರೀಕ್ಷಕ ನಾಗೇಶ್ ಕದ್ರಿ, ಮಹಾಮಸ್ತಕಾಭಿಷೇಕ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ, ವೇಣೂರು ಗ್ರಾ.ಪಂ ಅಧ್ಯಕ್ಷ ನೇಮಯ್ಯ ಕುಲಾಲ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here