ಬೆಳ್ತಂಗಡಿ: ಸವಣಾಲು ಗ್ರಾಮದ ಹಲಸಿನ ಕಟ್ಟೆ ಮಾರಿಗುಡಿಯ ಬಳಿ ಕೋಳಿ ಅಂಕ ನಡೆಯುತ್ತಿದ್ದಾಗ, ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ.
ಆ ವೇಳೆ ಕೋಳಿ ಅಂಕದಲ್ಲಿ ಭಾಗವಹಿಸಿದ್ದವರು ಓಡಿ ಹೋಗಿದ್ದು, ಸ್ಥಳದಲ್ಲಿದ್ದ ಕಾಲಿಗೆ ಕತ್ತಿಯನ್ನು ಕಟ್ಟಲಾಗಿದ್ದ ಎರಡು ಕೋಳಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ವಶಕ್ಕೆ ಪಡೆದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಇತ್ತೀಚೆಗಷ್ಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಕೋಳಿ ಅಂಕಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.