ವಿಜಯಪುರ: ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಜನರ ವಿಶ್ವಾಸ ಗಳಿಸಲು ಶಕಗತರಾಗದ ಅವರು ಖರೀದಿಯವರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.
ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರುಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ಸಿನಿಂದ ಹಲವಾರು ನಾಯಕರು ದುಂಬಾಲು ಬಿದ್ದಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಹಿಂದೆಯೂ ಎರಡು ಬಾರಿ ಹಾಗೇ ಮಾಡಿದ್ದಾರೆ. 2008 ರಿಂದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಇದ್ದಾಗಲೂ ಇದನ್ನೇ ಮಾಡಿದ್ದು. ಎಲ್ಲಾ ಕಡೆ ಕೊಂಡುಕೊಳ್ಳಲು ಪ್ರಯತ್ನ ಮಾಡುತ್ತಾರೆ. ಕೊಂಡುಕೊಳ್ಳಲು ಜನ ಸಿಕ್ಕರೆ ಸರ್ಕಾರ ರಚನೆ ಮಾಡುತ್ತಾರೆ ಇವರ ತಂತ್ರಗಳು ಜನರಿಗೆ ತಿಳಿದಿದೆ ಎಂದರು