ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಅರೋಗ್ಯ ಸಚಿವರು, ಜಿಲ್ಲಾ ಅರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರ ಅಭಿನಂದನೆ.
ಬೆಳ್ತಂಗಡಿ : ಕಳೆದ ಹಲವಾರು ವರ್ಷಗಳಿಂದ ಒಂದಿಲ್ಲೊoದು ಸಮಸ್ಯೆಗಳಿoದ ಹೆಸರು ಕೆಡಿಸಿಕೊಂಡಿದ್ದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಡಯಾಲಿಸಿಸ್ ಘಟಕದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಸಚಿವರ ಆಪ್ತ ಕಾರ್ಯದರ್ಶಿ ಕೆ. ಎ ಹಿದಾಯತುಲ್ಲ, ಜಿಲ್ಲಾ ಅರೋಗ್ಯಧಿಕಾರಿ ಡಾl. ಎಚ್ ಆರ್ ತಿಮ್ಮಯ್ಯ ರವರುಗಳಿಗೆ ಸಂತ್ರಸ್ತರ ಪರವಾಗಿ ಮತ್ತು ತಾಲೂಕಿನ ಜನತೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತಿರುವುದಾಗಿ ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅದೇ ರೀತಿ ಘಟಕಕ್ಕೆ ನಾಲ್ಕು ಡಯಾಲಿಸಿಸ್ ಯಂತ್ರಗಳು ಮತ್ತು ಏಳು ಸಾವಿರ ಲೀಟರ್ ಸಾಮರ್ಥ್ಯದ ಆರ್ ಓ ಯುನಿಟ್ ಅನ್ನು ಕೊಡುಗೆಯಾಗಿ ನೀಡಿದ ರೋಟರಿ ಕ್ಲಬ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಅನಂತ ಭಟ್,ಮಚ್ಚಿಮಲೆ, ನ್ಯಾಯವಾದಿ ಬಿ. ಕೆ ಧನಂಜಯ ರಾವ್ ಮತ್ತು ಎಲ್ಲಾ ಪದಾಧಿಕಾರಿಗಳಿಗೆ, ರೋಟರಿ ಕ್ಲಬ್ ಇಂದಿರಾನಗರ – ಬೆಂಗಳೂರಿನ ಅಧ್ಯಕ್ಷರಾದ ಬಾಲಕೃಷ್ಣನ್ ಮತ್ತು ಜಗದೀಶ್ ರಾವ್, ಮುಗುಳಿ ಮತ್ತು ಎಲ್ಲಾ ಪದಾಧಿಕಾರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿರುವುದಾಗಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.