ಬೆಳ್ತಂಗಡಿ; ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಅವಿವಾಹಿತ ಯುವತಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಮೃತ ಮಹಿಳೆ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ(30)ಎಂಬಾಕೆಯಾಗಿದ್ದಾಳೆ, ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಈಕೆ ಅನಾರೋಗ್ಯದ ಕಾರಣಕ್ಕೆ ಕೆಲ ದಿನಗಳ ಹಿಂದೆ ಮನೆಗೆ ಬಂದಿದ್ದಳು, ಮನೆಯೊಳಗೆಯೇ ಈಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಸ್ಥಳಕ್ಕೆ ಧರ್ಎ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಆಕೆ ಬರೆದಿದ್ದ ಡೆತ್ ನೋಟ್ ಸಿಕ್ಕಿದೆ ಎನ್ನಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.