ಗುರುವಾಯನಕೆರೆ ಕೆರೆ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ
ಬೆಳ್ತಂಗಡಿ:ಗುರುವಾಯನಕೆರೆಯ ಕೆರೆ ಬಳಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಫೆ 9 ರಂದು ಮುಂಜಾನೆ ನಡೆದಿದೆ.
ಗುರುವಾಯನಕೆರೆ ಕಾರ್ಕಳ ಹೆದ್ದಾರಿಯ ಕೆರೆಯ ಬಳಿ ಇರುವ
ದೊಡ್ಡ ತಿರುವಿನಲ್ಲಿ ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಲಾರಿ
ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ರಸ್ತೆಗೆ ಮುರಿದು ಬಿದ್ದ
ಪರಿಣಾಮ ಕೆಲವು ತಾಸು ವಾಹನ ಸಂಚಾರಕ್ಕೆತಡೆಯುಂಟಾಯಿತು. ತಕ್ಷಣ ಸ್ಥಳೀಯರು ಮೆಸ್ಕಾಂ
ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು ಅವರು ಬಂದು ವಾಹನ
ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಡಿಕ್ಕಿ ಹೊಡೆದ ಬಳಿಕ ಚಾಲಕ ಲಾರಿ ಸಹಿತ ಪರಾರಿಯಾಗಿದ್ದಾನೆ.
ಈಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿದ್ಯುತ್ ಕಂಬ ಹಾಕಲು ಮೆಸ್ಕಾಂ ಸಿಬ್ಬಂದಿಗಳು ಕ್ರಮ ಕೈಗೊಂಡಿದ್ದಾರೆ.