Home ಅಪರಾಧ ಲೋಕ ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ವಂಚನೆ

ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ವಂಚನೆ

104
0

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್​ಬಿಐ ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ತಮಿಳುನಾಡಿನ ಹೊಸೂರು ಮೂಲದ ಪವಿತ್ರ ತನ್ನ ಗ್ಯಾಂಗ್ ಜೊತೆ ಸೇರಿಸಿಕೊಂಡು ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿ ಅನೇಕರನ್ನು ತನ್ನ ಮೋಸದ ಬಲೆಗೆ ಬೀಳಿಸಿದ್ದಾಳೆ.
ಬ್ಲೂ ವಿಂಗ್ಸ್ ಹೆಸರಿಗೆ ಸುಮಾರು 17 ಕೋಟಿ ರೂಪಾಯಿ ಆರ್​ಬಿಐನಿಂದ ಬಂದಿರುವುದಾಗಿ ಹೇಳಿರುವುದಲ್ಲದೇ, ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಸಹಿ ಇರುವ ನಕಲಿ ಪತ್ರ ತೋರಿಸಿ ಅನೇಕಲ್ ನ ಚಂದಾಪುರ, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ನೂರಾರು ಜನವರಿಗೆ ವಂಚಿಸಿದ್ದಾಳೆ.
ನೋಟುಗಳ ಬಂಡಲ್ ಇರುವ ವಿಡಿಯೋಗಳನ್ನ ಕಳುಹಿಸಿ ಜನರನ್ನು ಮರುಳು ಮಾಡಿದ ಪವಿತ್ರಾ, ಒಬ್ಬರಿಗೆ 10 ಲಕ್ಷ ಲೋನ್ ನೀಡಿದರೆ ಅದರಲ್ಲಿ ಐದು ಲಕ್ಷ ಸಬ್ಸಿಡಿ ಎಂದು ನಂಬಿಸಿದ್ದಳು. ಲೋನ್ ಬೇಕು ಅಂದರೆ ಮೊದಲು ಹಣ ಡೆಪಾಸಿಟ್ ಮಾಡಬೇಕೆಂದು ಕಥೆ ಕಟ್ಟಿದ್ದು,ಇದನ್ನು ನಂಬಿದ ಜನರು ಲಕ್ಷಾಂತರ ರೂಪಾಯಿ ಹಣ ನೀಡಿದ್ದಾರೆ. ತಮ್ಮಲ್ಲಿ ಹಣ ಇಲ್ಲದೇ ಇನ್ನು ಕೆಲವರು ಸಾಲ ಮಾಡಿ ದುಡ್ಡು ಕೊಟ್ಟಿದ್ದಾರೆ.

ಹಲವು ತಿಂಗಳು ಕಳೆದರೂ ಸಾಲದ ಮೊತ್ತ ಬಾರದೆ ಇದ್ದಾಗ ವಂಚಕಿ ಪವಿತ್ರಾಳ ಮೋಸ ಬಯಲಾಗಿದೆ. ಪ್ರಕರಣ ಸಂಬಂಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪವಿತ್ರ, ಪ್ರವೀಣ್, ಯಲ್ಲಪ್ಪ, ಶೀಲ, ರುಕ್ಮಿಣಿ, ರಾಧ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಹಾಲ್ಬರ್ಟ್ ಮಾರ್ಟಿನ್, ಹೇಮಲತಾ, ಶಾಲಿನಿ ವಿರುದ್ಧ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here