ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ರಾಣಿಬೆನ್ನೂರು ತಾಲೂಕು ಹಾವೇರಿಯ ಮನೋಜ್ ಕುಮಾರ್ ಮತ್ತು ಮನೆಯವರು ಬೆಳ್ತಂಗಡಿ ಕಡೆಯಿಂದ ಕೊಟ್ಟಿಗೆಹಾರದ ಕಡೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿಯಾಗಿದ್ದು ಚಾಲಕ ಶ್ರೀಧರ ಸಣ್ಣ ನಿಂಗನವರ್ ಗಂಭೀರ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮನೋಜ್ ಕುಮಾರ್ ಅವರ ತಾಯಿ ರೆಜಿನಾ ಗ್ಲೋರಿ ಹಾಗೂ ತಂಗಿ ಪ್ರಾರ್ಥನಾ ಗಾಯಗೊಂಡಿದ್ದು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.