ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾಳೆ.
ಧರ್ಮಸ್ಥಳ ಗ್ರಾಮದ ಪಿಜತ್ತಡ್ಕದ ನಿವಾಸಿ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ.
ಫೆ.7ರಂದು ಈಕೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಸೋಮವಾರ ಮುಂಜಾನೆ ವಿದ್ಯಾರ್ಥಿನಿ ಮೃತ ಪಟ್ಟಿದ್ದಾಳೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ