ಬೆಳ್ತಂಗಡಿ.ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಬೇಟಿ ನೀಡಿದರು.ಸಚಿವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸ್ವಾಗತಿಸಿ ಮಾತನಾಡಿ ತಾಲೂಕು ವ್ಯಾಪ್ತಿಯಲ್ಲಿ ಅತೀ ಶೀಘ್ರವಾಗಿ ಕೈಗೊಳ್ಳಬೇಕಾದ ವಿದ್ಯುತ್ ಸಂಭಂದಿತ ಕಾಮಗಾರಿಗಳನ್ನು ಮಂಜೂರು ಮಾಡಬೇಕೆಂದು ಮನವಿ ಮಾಡಿದರು..
ನಂತರ ಮಾಡಿದ ಸಚಿವರು ತಾಲೂಕಿನಿಂದ ಮಾಡಿದ ಮನವಿಗೆ ಹಂತ ಹಂತವಾಗಿ ಮಂಜೂರಾತಿಗೆ ಕ್ರಮ ವಹಿಸುವುದಾಗಿ ಹೇಳಿದರು.
ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವಲ್ಲಿ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು.ಪೆಬ್ರವರಿ 17 ರಂದು ಮಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಎಲ್ಲರೂ ಶ್ರಮ ಪಡಬೇಕೆಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜೆ.ಆರ್ ಲೋಬೊ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ ಕುಮಾರ್ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಧರಣೇಂದ್ರ ಕುಮಾರ್ ,ಶೇಖರ್ ಕುಕ್ಕೆಡಿ,ನಮಿತಾ ಕೆ ಪೂಜಾರಿ ,ಮುಖಂಡರಾದ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ಗೌಡ ,ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುದರ್ಶನ್ ಶೆಟ್ಟಿ ಅರಂಬೋಡಿ, ಹಕಿಂ ಕೊಕ್ಕಡ, ತಾಲೂಕು ಭೂ ನ್ಯಾಯಮಂಡಳಿ ಸದಸ್ಯರಾದ ಇಸ್ಮಾಯಿಲ್ ಪೆರಿಂಜೆ,ಬೊಮ್ಮಣ್ಣ ಗೌಡ ಪುದುವೆಟ್ಟು, ಹಾಗೂ ಪಕ್ಷದ ಪದಾಧಿಕಾರಿಗಳು ,ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು