Home ರಾಜಕೀಯ ಸಮಾಚಾರ ಬಹಿರಂಗ ಚರ್ಚೆಗೆ ಬನ್ನಿ ಅಮಿತ್ ಷಾ ಅವರಿಗೆ ಸಿದ್ದರಾಮಯ್ಯ ಸವಾಲು

ಬಹಿರಂಗ ಚರ್ಚೆಗೆ ಬನ್ನಿ ಅಮಿತ್ ಷಾ ಅವರಿಗೆ ಸಿದ್ದರಾಮಯ್ಯ ಸವಾಲು

158
0

ಬೆಂಗಳೂರು; ರಾಜ್ಯದ ಕಾಂಗ್ರೆಸ್ ಸರಕಾರ ಜನರಿಗೆ ನೀಡಿರುವ ಗ್ಯಾರಂಟಿಗಳ ಬಗ್ಗೆ ಅಮಿತ್ ಷಾ ಅವರು ಬಹಿರಂಗ ಚರ್ಚ್ ಗೆ ಬರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಸಮಾಜಿಕ ಜಲಾತಾಣ ಎಕ್ಸ್ ನಲ್ಲಿ ಈ ಬಗ್ಗೆ ಹೀಗೆ ಬರೆದಿದ್ದಾರೆ
ಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ @AmitShah ಅವರು ‘‘ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ’’ ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ. ಇದು ಅಮಿತ್ ಶಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ, ಗ್ಯಾರಂಟಿ ಯೋಜನೆಗಳಿಂದ ನಮ್ಮ ಖಜಾನೆ ಬರಿದಾಗಿಲ್ಲ, ಬದಲಿಗೆ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎನ್ನುವುದನ್ನು ನಾನು ಸಾಬೀತು ಮಾಡಬಲ್ಲೆ. ಇದು ಅಮಿತ್ ಶಾ ಅವರಿಗೆ ನನ್ನ ಸವಾಲು ಕೂಡಾ ಹೌದು.

ಕರ್ನಾಟಕದ ಬಗ್ಗೆ ಮಾತನಾಡುವಾಗ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ @BJP4India ನಾಯಕರು ತಮ್ಮ ಆಳ್ವಿಕೆಯ ರಾಜ್ಯಗಳಲ್ಲಿ ಅದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ಸನ್ಮಾನ್ಯ ಪ್ರಧಾನಿ @narendramodi ಅವರು ನಮ್ಮ ಗ್ಯಾರಂಟಿಯ ಯೋಜನೆಗಳನ್ನು ಮಾತ್ರ ಅಲ್ಲ, ಗ್ಯಾರಂಟಿ ಎಂಬ ಹೆಸರನ್ನೂ ಕದ್ದು ಈಗ ಅದೇ ಹೆಸರಲ್ಲಿ ಜಾಹೀರಾತು ನೀಡಿದ್ದಾರೆ. ಇದು ಆ ಪಕ್ಷದ ಬಡಜನ ವಿರೋಧಿ ನಿಲುವು ಮತ್ತು ಬೌದ್ದಿಕ ದಿವಾಳಿತನವನ್ನು ತೋರಿಸುತ್ತದೆ. ಎಂದು ಸಿದ್ದರಾಮಯ್ಯ ಅವರು ಸಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಬರೆದಿದ್ದಾರೆ

LEAVE A REPLY

Please enter your comment!
Please enter your name here