ಬೆಂಗಳೂರು; ವಿಧಾನಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಗೆಲುವು ಸಾಧಿಸಿದೆ ಮೊದಲ ಚುನಾವಣೆಯಲ್ಲಿಯೇ ಬಿಜೆಪಿ ಜನತಾದಳ ಮೈತ್ರಿಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪುಟ್ಟಣ್ಣ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಮತೆಎಣಿಕೆಯ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದ ಪುಟ್ಟಣ್ಣ, ಅಂತಿಮವಾಗಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ್ ಅವರನ್ನು 1,507 ಮತಗಳ ಅಂತರದಿಂದ ಸೋಲಿಸಿ ಗೆಲುವನ್ನು ಪಡೆಸುಕೊಂಡರು.
ಈ ಮೂಲಕ ಮೈತ್ರಿಯೊಂದಿಗೆ ಎದುರಿಸಿದ ಮೊದಲ ಚುನಾವಣೆಯಲ್ಲೇ ಬಿಜೆಪಿ ಹಾಗೂ ಜೆಡಿಎಸ್‌ಗೆ ಮುಖಭಂಗವಾಗಿದೆ.
ಬೆಂಗಳೂರಿನಲ್ಲಿ ಮತಎಣಿಕೆ ನಡೆದಿದ್ದು, ಕಾಂಗ್ರೆಸ್ನ ಪುಟ್ಟಣ್ಣ ಒಟ್ಟು 8,260 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ಅವರಿಗೆ ಒಟ್ಟು 6753 ಮತಗಳು ಬಿದ್ದಿವೆ. ಇನ್ನು 1239 ಮತಗಳು ತಿರಸ್ಕೃತಗೊಂಡಿವೆ. ಇದರೊಂದಿಗೆ ಪುಟ್ಟಣ್ಣ, 1507 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರು ಶಿಕ್ಷಕ ಕ್ಷೇತ್ರಕ್ಕೆ ಇದೇ ಫೆಬ್ರವರಿ 16ರಂದು ಉಪಚುನಾವಣೆ ನಡೆದಿತ್ತು. ವಿಧಾನ ಪರಿಷತ್ ಸದಸ್ಯರಾಗಿದ್ದ, ಬಿಜೆಪಿಯಲ್ಲಿದ್ದ ಪುಟ್ಟಣ್ಣ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ಕಾರಣಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು.
ಈ ಉಪ ಚುನಾವಣೆಯನ್ನು ಅತ್ಯಂತ ಪ್ರತಿಷ್ಠೆಯ ವಿಚಾರವಾಗಿ ಎಲ್ಕ ಪಕ್ಷಗಳೂ ಪರಿಗಣಿಸಿದ್ದವು. ಬಿಜೆಪಿ ಜೆಡಿಎಸ್‌ಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿತ್ತು. ಜೆಡಿಎಸ್ನ ರಂಗನಾಥ್ ಅವರು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಇದೀಗ ಮೊದಲ ಚುನಾವಣೆಯಲ್ಲೇ ಮೈತ್ರಿಗೆ ಸೋಲಾಗಿದೆ.