Home ಅಪರಾಧ ಲೋಕ ಸೌಜನ್ಯ ಪ್ರಕರಣ ಮರು ತನಿಖೆಗೆ ಕುಟುಂಬಸ್ಥರಿಂದ ಹೈಕೋರ್ಟಿನಲ್ಲಿ ಅರ್ಜಿ, ಸಿಬಿಐಗೆ ನೋಟೀಸ್

ಸೌಜನ್ಯ ಪ್ರಕರಣ ಮರು ತನಿಖೆಗೆ ಕುಟುಂಬಸ್ಥರಿಂದ ಹೈಕೋರ್ಟಿನಲ್ಲಿ ಅರ್ಜಿ, ಸಿಬಿಐಗೆ ನೋಟೀಸ್

463
0

Courtesy murder case petitioned by family members in High Court for re-investigation, notice to CBI

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ನಡೆದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು ಎಂದು ಸೌಜನ್ಯ ಕುಟುಂಬದವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಕೆ ನಟರಾಜನ್‌ ಅವರಿದ್ದ ಏಕಸದಸ್ಯ ಪೀಠವು ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದೆ.

ಮೃತ ಬಾಲಕಿಯ ತಂದೆ ಧರ್ಮಸ್ಥಳದ ಪಾಂಗಳದ ನಿವಾಸಿ ಚಂದಪ್ಪ ಗೌಡ ಅವರು ಸಲ್ಲಿಸಿದ ರಿಟ್‌ ಅರ್ಜಿಯ ವಿಚಾರಣೆಯನ್ನು ಮಂಗಳವಾರ ಪೀಠವು ನಡೆಸಿತು. ವಿಚಾರಣೆಯ ವೇಳೆ ಅರ್ಜಿದಾರರ ಪರ ಹಿರಿಯ ವಕೀಲರಾದ ಎಂ ಆರ್‌ ಬಾಲಕೃಷ್ಣ ವಾದ ಮಂಡಿಸಿದರು.

“ಪ್ರಕರಣದಿಂದ ಸಂತೋಷ್‌ ರಾವ್ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿ ಇದೆ. ಮೇಲ್ಮನವಿಯ ಜೊತೆಗೆ ಈ ಅರ್ಜಿಯನ್ನೂ ವಿಚಾರಣೆಗೆ ನಿಗದಿಗೊಳಿಸಬೇಕು” ಎಂದು ಅವರು ಮನವಿ ಮಾಡಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ ರೋಸ್ಟರ್ ಅನುಸಾರ ಸೂಕ್ತ ವಿಭಾಗೀಯ ನ್ಯಾಯ ಪೀಠದ ಮುಂದೆ ಈಅರ್ಜಿಯನ್ನು ವಿಚಾರಣೆಗೆ ನಿಗಧಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿತ್ತು.

ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಾಹಾ ನಿರ್ದೇಶಕರು,ಸಿಐಡಿ ಎಡಿಜಿಪಿ,ಅಪರಾಥವಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿ,ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿ,ಮತ್ತು ಸಿಬಿಐಗೆ ನೋಟೀಸ್ ಜಾರಿಗೊಳಿಸಲು ಆದೇಶಿಸಿದೆ.

ಸಿಬಿಐ ಆರೋಪಿಯೆಂದು ಬಂಧಿಸಿ ಆರೋಪ ಪಟ್ಟಿ ಸಲ್ಲಿಸಿದ್ದ ಸಂತೋಷ್ ರಾವ್ ನನ್ನು ನ್ಯಾಯಾಲಯ 2023ರಲ್ಲಿ ನಿರಪರಾಧಿ ಎಂದು ಬಿಡುಗಡೆಗೊಳಿಸಿದೆ.ಈ ಪ್ರಕರಣದಲ್ಲಿ ನ್ಯಾಯೋಚಿತವಾಗಿ ತನಿಖೆ ನಡೆದಿಲ್ಲ ಹೀಗಾಗಿ ಮರು ತನಿಖೆ ನಡೆಸಲು ಆದೇಶಿಸಬೇಕು ಎಂದು ಅರ್ಜಿದಾರರು ನ್ಯಾಯಾಲಯದ ಮುಂದೆ ಕೋರಿದ್ದಾರೆ

LEAVE A REPLY

Please enter your comment!
Please enter your name here