Contempt of Court by Mahesh Shetty Timarodi, High Court issues notice to officials


ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ನ್ಯಾಯಾಲಯದ ಆದೇಶಗಳ ಉಲ್ಲಂಘನೆ ತಡೆಯುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ, ಪೋಲೀಸ್ ಮಹಾ ನಿರ್ದೇಶಕರು ಹಾಗೂ ಇನ್ನಿತರ ಉನ್ನತ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಲು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.
ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿದ್ದ ಭಾಷಣಗಳ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ, ಹೈಕೋರ್ಟ್ ಮತ್ತೊಂದು ಮಹತ್ವದ ಆದೇಶ ಮಾಡಿದೆ. ಈಗಾಗಲೇ ತಿಮರೋಡಿಗೆ ನ್ಯಾಯಾಲಯದ ಅದೇಶ ಉಲ್ಲಂಘಸಿ ಭಾಷಣ ಮಾಡದಂತೆ ಹೈಕೋರ್ಟ್ ಎಚ್ಚರಿಕೆ ನೀಡಿದ್ದರೂ, ನಿರಂತರ ನ್ಯಾಯಾಲಯ ಅದೇಶದ ಉಲ್ಲಂಘನೆ ಮಾಡುತ್ತಿರುವುದನ್ನು ನ್ಯಾಯಾಲಯದ ಗಮನಕ್ಕೆ ತಂದಾಗ ಮಾನ್ಯ ನ್ಯಾಯಾಲಯವು ನೋಟೀಸ್ ಜಾರಿಗೊಳಿಸುವಂತೆ ಆದೇಶ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಪಿ. ಎಸ್. ದಿನೇಶ್ ಕುಮಾರ್ ಹಾಗೂ ನ್ಯಾಯಮೂರ್ತಿ ಮಾನ್ಯ ಟಿ. ಜಿ. ಶಿವಶಂಕರೇ ಗೌಡ ಅವರ ಪೀಠ ಆದೇಶ ಮಾಡಿದೆ.
ಅರ್ಜಿದಾರರ ಪರ ಖ್ಯಾತ ನ್ಯಾಯವಾದಿ ರಾಜಶೇಖರ್ ಹಿಲ್ಯಾರ್ ವಾದಿಸಿದರು.