ವೇಣೂರು: ವೇಣೂರು ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕ ಫೆ 22 ರಿಂದ ಮಾ 1ರವರೆಗೆ ನಡೆಯಲಿದ್ದು ಶತಮಾನದ 3 ಮಹಾ ಮಸ್ತಕಾಭಿಷೇಕ ಮಹೋತ್ಸವಕ್ಕೆ ಫೆ22ರಂದು ಚಾಲನೆ ನೀಡಲಾಯಿತು.
ಸಂಜೆ ನಡೆದ ಸಮಾರಂಭದಲ್ಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಕಾರ್ಯಕ್ರಮಗಳ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ 108 ಶ್ರೀ ಅಮೋಘಕೀರ್ತಿ
ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮಹಾರಾಜರು. ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ, ಮೂಡುಬಿದಿರೆ, ಹಾರಿಕಾಮಾತಾಜಿ, ಕುಲಿಕಾ ಮಾತಾಜಿ ಪಾವನ ಸಾನ್ನಿಧ್ಯ ವಹಿಸಿ, ಆಶೀರ್ವದಿಸಿದರು.
ಅಳದಂಗಡಿ ಅರಮನೆಯ ಸ್ಥಾಪಕ ವಂಶಿಯ ಅರಸರು ಮತ್ತು ಕಾರ್ಯಾಧ್ಯಕ್ಷರು ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಗೌರವ ಉಪಸ್ಥಿತರಿದ್ದು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್, ಮಹಾಮಸ್ತಕಾಭಿಷೇಕ ಸಮಿತಿ ಪ್ರಧಾನ ಸಂಚಾಲಕ ಡಿ.ಹರ್ಷೇಂದ್ರಕುಮಾರ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ, ಕೋಶಾಧಿಕಾರಿ ಜಯರಾಜ್ ಕಂಬಳಿ ಉಪಸ್ಥಿತರಿದ್ದರು.
ಶ್ರೀಮತಿ ಪದ್ಮಾವತಿ ಬಳೆಂಜ ಪ್ರಾರ್ಥಿಸಿ, ಡಾ| ಪದ್ಮಪ್ರಸಾದ್ ಅಜಿಲರು ಸ್ವಾಗತಿಸಿದರು. ಮೂಡಬಿದ್ರೆ ವಿಶ್ರಾಂತ ಮುಖ್ಯೋಪಾಧ್ಯಾಯರು ಮುನಿರಾಜ ರೆಂಜಾಳ ಕಾರ್ಯಕ್ರಮ ನಿರೂಪಿಸಿದರು. ಶಿವಪ್ರಸಾದ್ ಅಜಿಲರು ಧನ್ಯವಾದವಿತ್ತರು.