ಪುತ್ತೂರು; ಟಿಪ್ಪರ್ ಹಾಗೂ ಡಿಯೋ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಮೃತವ್ಯಕ್ತಿ ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ.
ಇನ್ನೋರ್ವ ಸವಾರ ಪವನ್ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಟಿಪ್ಪರ್ ಹಾಗೂ ಡಿಯೋ ದ್ವಿಚಕ್ರ ವಾಹನಗಳ ನಡುವೆ ಮುರದಲ್ಲಿ ಗುರುವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ. ಪುತ್ತೂರಿನಿಂದ ಕಬಕ ಕಡೆ ತೆರಳುತ್ತಿದ್ದ ಡಿಯೋ ಹಾಗೂ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ.