Home ರಾಜಕೀಯ ಸಮಾಚಾರ ಹಿಂದೂ ದೇವಸ್ಥಾನಗಳ ಹಣವನ್ನು ಹಿಂದೂ ಆಚರಣೆಗಳಿಗೇ ಬಳಕೆ, ಸಿ.ಎಂ.ಸಿದ್ದರಾಮಯ್ಯ

ಹಿಂದೂ ದೇವಸ್ಥಾನಗಳ ಹಣವನ್ನು ಹಿಂದೂ ಆಚರಣೆಗಳಿಗೇ ಬಳಕೆ, ಸಿ.ಎಂ.ಸಿದ್ದರಾಮಯ್ಯ

173
0

Hindu temple money is used for Hindu rituals, CM Siddaramaiah
ಬೆಳ್ತಂಗಡಿ; ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ದ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲಕ ಪ್ರಯತ್ನ ಮಾಡುತ್ತಿದ್ದಾರೆ. ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯ ಮಂತ್ರಿಗಳು
ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ. ಎಂದು ಅವರು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here