ಬೆಳ್ತಂಗಡಿ; ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ದ್ವಿಚಕ್ರವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಫೆ 23ರಂದು ಸಂಭವಿಸಿದೆ.
ಗಾಯಾಳು ಮಹಿಳೆ ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ(45)ಎಂಬವರಾಗಿದ್ದಾರೆ.
ಇವರು ಸಂತೋಷ್ ಎಂಬವರು ಚಲಾಯಿಸುತ್ತಿದ್ದ ದ್ವಿಚಕ್ರವಾಹನದಲ್ಲಿ ಸಹ ಸವಾರೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿಗೆ ಬಂದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ವಾಹನ ಮಗುಚಿ ಬಿದ್ದಿದೆ. ಕಮಲ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭಿರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಸಂತೋಷ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.