Home ರಾಜಕೀಯ ಸಮಾಚಾರ ಡಿವೈಎಫ್.ಐ ರಾಜ್ಯ ಸಮ್ಮೇಳನ; ನಿರುದ್ಯೋಗ ಸಮಸ್ಯೆ ಕೋಮುವಾದಕ್ಕೆ ಲಿಂಕ್ ಇದೆ- ಜಸ್ಟೀಸ್ ಎಚ್. ಎನ್....

ಡಿವೈಎಫ್.ಐ ರಾಜ್ಯ ಸಮ್ಮೇಳನ; ನಿರುದ್ಯೋಗ ಸಮಸ್ಯೆ ಕೋಮುವಾದಕ್ಕೆ ಲಿಂಕ್ ಇದೆ- ಜಸ್ಟೀಸ್ ಎಚ್. ಎನ್. ನಾಗಮೋಹನದಾಸ್

0

ಬೆಳ್ತಂಗಡಿ; ನಿರುದ್ಯೋಗ ಯುವಜನರನ್ನು ಕಾಡುತ್ತಿರುವ ಸಮಸ್ಯೆಯಾಗಿದೆ. ಐವತ್ತು ವರ್ಷಗಳಲ್ಲಿ ದೇಶ ಕಾಣದ ನಿರುದ್ಯೋಗ ಪ್ರಮಾಣ ಪ್ರಸ್ತುತ ದೇಶದಲ್ಲಿದೆ. ನಮ್ಮಲ್ಲಿ ವಿದ್ಯೆ ಇದೆ, ಪದವಿ ಇದೆ ಆದರೆ ಉದ್ಯೋಗವಿಲ್ಲ. ನಮ್ಮ ವಿದ್ಯಾರ್ಹತೆಗೆ ತಕ್ಕ ಉದ್ಯೋಗವು ಸಿಗುತ್ತಿಲ್ಲ. ಪದವಿ ಇದ್ದರೂ ಏನು ಪ್ರಯೋಜನವಿಲ್ಲದಂತಾಗಿದೆ. ಎಲ್ಲ ವಲಯದಲ್ಲಿ ಅರ್ಹ ಅಭ್ಯರ್ಥಿಗಳಿಲ್ಲ. ಅಸಂಪೂರ್ಣೋದ್ಯೋಗ (under employment) ಕೂಡಾ ಒಂದು ಸಮಸ್ಯೆ ಆಗಿದೆ ಎಂದು ಜಸ್ಟೀಸ್ ಎಚ್. ಎನ್. ನಾಗಮೋಹನದಾಸ್ ಹೇಳಿದರು.


ನಗರದ ಕಲ್ಲಾಪಿನಲ್ಲಿರುವ ಯುನಿಟಿ ಸಭಾಂಗಣದಲ್ಲಿ ಫೆಬ್ರವರಿ 25ರಂದು ಭಾರತ ಪ್ರಜಾಸತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ನ 12ನೇ ರಾಜ್ಯ ಸಮ್ಮೇಳನ ನಡೆದಿದ್ದು ಈ ಸಮಾರಂಭವನ್ಮು ಉದ್ಘಾಟಿಸಿ ಜಸ್ಟೀಸ್ ಎಚ್. ಎನ್. ನಾಗಮೋಹನದಾಸ್ ಮಾತಾನಾಡಿದರು.
ಜಗತ್ತಿನ ಒಟ್ಟು ಜನಸಂಖ್ಯೆಯಲ್ಲಿ ಮೂರನೇ ಒಂದು ಭಾಗ ಯುವಜನರಿದ್ದಾರೆ. ವಿಮೋಚನಾ ಹೋರಾಟದಿಂದ ಹಿಡಿದು ಇಲ್ಲಿಯವರಿಗೆ ಭಾರತಕ್ಕಾಗಿ ಯುವಕರ ಕೊಡುಗೆ ಬಹಳ ಮಹತ್ವದ್ದಾಗಿದೆ. ಅಬ್ಬಕ್ಕ ರಾಣಿಯಂತಹ ಕಿಚ್ಚಿನ ನಾಯಕಿಯ ಜಾಗದಲ್ಲಿ ಈ ಸಮ್ಮೇಳನ ನಡೆಯುತ್ತಿರುವುದು ಸಂತಸದ ಸಂಗತಿ. ಯುವಕರೆಂದರೆ ಬದಲಾವಣೆ, ಪ್ರಗತಿ, ಅನ್ಯಾಯ, ಶೋಷಣೆ, ದಬ್ಬಾಳಿಕೆ ವಿರುದ್ಧ ಹೋರಾಡುವ ಶಕ್ತಿಯಾಗಿದೆ. ಈ ಶಕ್ತಿ ಬಲಗೊಳ್ಳಲಿ ಎಂಬ ಆಶಯದೊಂದಿಗೆ ನಾನು ಸಮ್ಮೇಳನ ಉದ್ಘಾಟಿಸುತ್ತಿದ್ದೇನೆ ಎಂದರು.

ಎಲ್ಲಾ ಮಕ್ಕಳು ಒಂದೇ ಎನ್ನುತ್ತೇವೆ. ಆದರೆ ಶಿಕ್ಷಣದಲ್ಲಿ ಯಾಕೆ ತಾರತಮ್ಯ?. ಇದರಿಂದಾಗಿಯೇ ಮಕ್ಕಳ ನಡುವೆ ತಾರತಮ್ಯ ಸಷ್ಟಿಸಲಾಗುತ್ತಿಲ್ಲವೇ?. ಸಮಾನ ಶಿಕ್ಷಣದ ನೀತಿ ಜಾರಿಯಾಗಬೇಕಿದೆ. ಗುಣಾತ್ಮಕ ಶಿಕ್ಷಣ ನೀಡುವ ವ್ಯವಸ್ಥೆ ಜಾರಿ ಬರಬೇಕಾಗಿದೆ. ಹೊಸ ಶಿಕ್ಷಣ ನೀತಿಯ ಬಗ್ಗೆ ಚರ್ಚೆಯಾಗಬೇಕು ಎಂದು ಅಭಿಪ್ರಾಯಿಸಿದರು.
ಉದ್ಯೋಗ ಸೃಷ್ಟಿ ಕಡಿಮೆಯಾದಂತೆ ಅಪರಾಧೀಕರಣ, ಕೋಮುವಾದ, ಭಯೋತ್ಪಾದನೆ, ವೇಶ್ಯಾವಾಟಿಕೆ ಮೊದಲಾದವು ಹೆಚ್ಚಾಗುತ್ತದೆ. ನಿರುದ್ಯೋಗ ಸಮಸ್ಯೆಗೂ, ಕೋಮುವಾದ, ಅಪರಾಧಕ್ಕೂ ಲಿಂಕ್ ಇದೆ ಎಂದು ಸರ್ಕಾರ ತಿಳಿದುಕೊಳ್ಳಬೇಕು ಎಂದರು.


ಸಂವಿಧಾನದ ಮೂಲಕ ಪ್ರಜಾಪ್ರಭುತ್ವದಲ್ಲಿ ಬದಲಾವಣೆ ತರಲಾಗಿದೆ. ದಲಿತರು, ಮಹಿಳೆಯರು ಈ ದೇಶದ ಅಭಿವೃದ್ದಿಯಲ್ಲಿ ದುಡಿಯಲು ಸಾಧ್ಯವಾಗಿದೆ. ಭಾರತೀಯರಿಗೆ ಮಹಾನ್ ಗ್ರಂಥ ಸಂವಿಧಾನ. ಇದನ್ನು ಓದಬೇಕು, ಅರ್ಥೈಸಿಕೊಳ್ಳಬೇಕು, ಅದರಂತೆ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಇಷ್ಟೆಲ್ಲ ಸಾಧನೆ ಮಾಡಿದ್ದರು ಭಾರತ ಇನ್ನೂ ಸುಧಾರಣೆ ಕಂಡಿಲ್ಲ, ಬಡತನ, ನಿರುದ್ಯೋಗ, ಕೋಮುವಾದ ಬಲಿಯೊಳಗೆ ಭಾರತ ಸಿಕ್ಕು ನರಳುತ್ತಿದೆ. ಇದರ ವಿರುದ್ಧ ಯುವಕರು ಹೋರಾಡಬೇಕಿದೆ. ಶಿಕ್ಷಣದಲ್ಲಿ ತಾರತಮ್ಯ ಹೆಚ್ಚಾಗುತ್ತಿದೆ. ಶ್ರೀಮಂತರಿಗೆ ಒಂದು, ಬಡವರಿಗೆ ಇನ್ನೊಂದು ಎಂಬ ಆಯ್ಕೆಯ ಮೂಲಕ ಮಕ್ಕಳಲ್ಲಿ ಅಸಮಾನತೆ, ಅಸೂಯೆ ಸೃಷ್ಟಿಯಗುತ್ತಿದೆ. ಈ ತಾರತಮ್ಯ ನಿಲ್ಲಬೇಕದರೆ, ಸಮಾನ ಗುಣಮಟ್ಟದ ಶಿಕ್ಷಣ ಸಿಗಬೇಕು, ಶಿಕ್ಷಣಕ್ಕೆ ತಕ್ಕಂತೆ ಉದ್ಯೋಗ ಸೃಷ್ಟಿಯಾಬೇಕು ಎಂದರು.

ನನ್ನೊಳಗೆ ಬದಲಾವಣೆ, ಗಟ್ಟಿತನ, ಧೈರ್ಯ, ಬದ್ದತೆ ತಂದು ಕೊಟ್ಟಿದ್ದು ಡಿವೈಎಫ್ಐ, ನಾಲ್ಕು ದಶಕಗಳ ಹಿಂದೆ ನಾನು ರಾಜ್ಯವೆಲ್ಲ ಸುತ್ತಾಡಿ ಯುವಜನರನ್ನು ಸಂಘಟಿಸಿದ್ದೆ ಎಂದು ಹಿಂದಿನ ಹೋರಾಟಳನ್ನು ಮೆಲಕು ಹಾಕಿದ್ದರು.
ಸಮಾವೇಶವನ್ನು ಉದ್ದೇಶಿಸಿ ನಿವೃತ್ತ ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ಮಾತನಾಡಿದರು.
ಅಧ್ಯಕ್ಷತೆಯನ್ನು ಡಿ.ವೈ.ಎಫ್.ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ವಹಿಸಿದ್ದರು.
ಡಿವೈಎಫ್‌ಐ ಅಖಿಲ ಭಾರತ ಸಮಿತಿ ಸದಸ್ಯರಾದ ಜ್ಯಾಕ್ ಸಿ ಥಾಮಸ್ ಮಾತನಾಡಿ, “ಕಾನೂನುಬಾಹಿರ ಆಗಿರುವುದನ್ನು ಕಾನೂನಿಗ ಚೌಕಟ್ಟಿನ ಒಳಗೆ ತಂದ ಏಕೈಕ ದೇಶ ಭಾರತ. ಅದುವೇ ಚನಾವಣಾ ಬಾಡ್ ಆಗಿದೆ. ಇತ್ತೀಚೆಗೆ ಚುನಾವಣಾ ಬಾಂಡ್ ಅನ್ನು ದೇಶದಲ್ಲಿ ನಿಷೇಧ ಮಾಡಲಾಗಿದೆ. ಚುನಾವಣಾ ಬಾಂಡ್ ಮೂಲಕ ಯಾವುದೇ ಪಕ್ಷ ಲೆಕ್ಕವಿಲ್ಲದೆ ಕೋಟ್ಯಾಂತರ ರೂಪಾಯಿ ಪಡೆಯಬಹುದು. ಇದರ ಖಾತೆಯನ್ನು ಎಸ್‌ಬಿಐನಲ್ಲಿ ತೆರೆಯಲಾಗುತ್ತದೆ. ಆದರೆ ಈ ದೇಶದಲ್ಲಿ ಇದರ ಖಾತೆ ಇಲ್ಲದ ಏಕೈಕ ಪಕ್ಷ ಎಡ ಪಕ್ಷ,” ಎಂದು ತಿಳಿಸಿದರು.

ರಮೇಶ್ ಕುಮಾರ್ ಸ್ಮರಣೆಯಲ್ಲಿ ಹೋರಾಟ ಚಳುವಳಿಗಳ ನೆನಪಿನ ಪೋಸ್ಟರ್ ಗ್ಯಾಲರಿಯನ್ನು ವಿಶ್ರಾಂತ ಜಿಲ್ಲಾಧಿಕಾರಿ (ಐಎಎಸ್), ಸ್ವಾಗತ ಸಮಿತಿಯ ಗೌರವಾಧ್ಯಕ್ಷರು ಆದ ಎ.ಬಿ. ಇಬ್ರಾಹಿಂ ಅವರು ಉದ್ಘಾಟನೆ ಮಾಡಿದರು. ವೇದಿಕೆಯಲ್ಲಿ ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ್ ಪೂಜಾರ್, ಡಿವೈಎಫ್‌ಐ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ರಜೀಶ್ ವೆಲ್ಲಾಟ್, ಡಿವೈಎಫ್‌ಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರು ರೇಣುಕಾ ಕಹಾರ್, ಆಶಾ ಬೋಳೂರು, ಎಸ್‌ಎಫ್‌ಐನ ರಾಜ್ಯ ಕಾರ್ಯದರ್ಶಿ ಭೀಮನಗೌಡ, ಸ್ವಾಗತ ಸಮಿತಿ ಸದಸ್ಯರಾದ ಸುನೀಲ್ ಕುಮಾರ್ ಬಜಾಲ್, ಕೃಷ್ಣಪ್ಪ ಕೊಂಚಾಡಿ, ಬಿಕೆ ಇಂತಿಯಾಜ್, ವಕೀಲ ರಾಮಚಂದ್ರ ಬಬ್ಬುಕಟ್ಟೆ, ಡಾ. ಜೀವನ್ ರಾಜ್ ಕುತ್ತಾರ್ ಉಪಸ್ಥಿತರಿದ್ದರು. ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಸ್ವಾಗತಿಸಿದರು. ಡಿವೈಎಫ್‌ಐ ಜಿಲ್ಲಾಧ್ಯಕ್ಷರು ಬಿಕೆ ಇಂತಿಯಾಜ್ ಧನ್ಯವಾದ ತಿಳಿಸಿದರು. ಡಿವೈಎಫ್‌ಐ ಮುಖಂಡರಾದ ಮನೋಜ್ ವಾಮಂಜೂರು ಕಾರ್ಯಕ್ರಮ ನಿರ್ವಹಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version