Home ಸ್ಥಳೀಯ ಸಮಾಚಾರ ತೋಟತ್ತಾಡಿ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಸಾವು

ತೋಟತ್ತಾಡಿ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಸಾವು

397
0

ಬೆಳ್ತಂಗಡಿ; ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ದ್ವಿಚಕ್ರವಾಹನ ಮಗುಚಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತ ಮಹಿಳೆ ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ(45)ಎಂಬವರಾಗಿದ್ದಾರೆ.
ಇವರು ದ್ವಿಚಕ್ರವಾಹನದಲ್ಲಿ ಸಹ ಸವಾರೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿಗೆ ಬಂದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ವಾಹನ ಮಗುಚಿ ಬಿದ್ದಿದೆ. ಕಮಲ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭಿರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಈಕೆ ಸೋಮವಾರ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here