ಬೆಳ್ತಂಗಡಿ; ಹೊಸಂಗಡಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದವೇಳೆ ವೇಣೂರು ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲಾರಿಯಲ್ಲಿ ಚಾಲಕ ಕಾಶೀಪಟ್ಣ ನಿವಾಸಿ ವಸಂತ ಎಂಬಾತ ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ವೇಣೂರು ಪೊಲೀಸರು ವಾಹನ ತಪಾಸಣೆಯ ವೇಳೆ ಕೆ.ಎ07 ಬಿ 5412 ಲಾರಿಯನ್ನು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಅಕ್ರಮ ಮರಳು ಸಾಗಾಟ ಪತ್ತೆಯಾಗಿದೆ. ಯಾವುದೋ ನದಿಯಿಂದ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಹಿನ್ನಲೆಯಲ್ಲಿ ಪೊಲೀಸರು ಲಾರಿಯನ್ನು ಮರಳಿನ ಸಮೇತ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.