Home ಬ್ರೇಕಿಂಗ್‌ ನ್ಯೂಸ್ ಪಾಕಿಸ್ತಾನ ಪರ ಘೋಷಣೆ ಆರೋಪ; ವಿಡಿಯೋ ಪರಿಶೀಲನೆ ಬಳಿಕ ಕ್ರಮ ಗೃಹ ಸಚಿವ ಡಾ.ಜಿ...

ಪಾಕಿಸ್ತಾನ ಪರ ಘೋಷಣೆ ಆರೋಪ; ವಿಡಿಯೋ ಪರಿಶೀಲನೆ ಬಳಿಕ ಕ್ರಮ ಗೃಹ ಸಚಿವ ಡಾ.ಜಿ ಪರಮೇಶ್ವರ್

143
0

ಬೆಂಗಳೂರು, ಫೆಬ್ರವರಿ 28: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದಾರೆ. ವಿಡಿಯೋದಲ್ಲಿ ಕೆಲವರು ನಾಸಿರ್ ಸಾಬ್ ಅಂತಹೇಳಿದ್ದಾರೆ ಎನ್ನುತ್ತಿದ್ದಾರೆ, ಕೆಲವರು ಪಾಕಿಸ್ತಾನ ಅಂತಹೇಳಿದ್ದಾರೆ ಎನ್ನುತ್ತಿದ್ದಾರೆ ವೈಜ್ಞಾನಿಕವಾಗಿ ಸತ್ಯಾಸತ್ಯತೆ ತಿಳಿಯಲು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ವಿಡಿಯೋ ಕಳುಹಿಸುತ್ತಿದ್ದೇವೆ. ಒಂದು ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರೇ ಕಾನೂನು ಕ್ರಮ ಆಗೇ ಆಗುತ್ತೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಯಾರು ಮೊದಲು ಪ್ರಸಾರ ಮಾಡಿದ್ದಾರೆ ಅವರಿಂದ ವಿಡಿಯೋ ಪಡೆದು ತನಿಖೆ ಮಾಡುತ್ತೇವೆ. ಎಫ್​ಎಸ್​ಎಲ್​ಗೆ ಕಳುಹಿಸಿರುವ ಪ್ರಕಿಯೆಗಳು ಆರಂಭವಾಗಿವೆ. ಪೊಲೀಸರು ಮಾಡಿರುವ ವಿಡಿಯೋ ಚಿತ್ರೀಕರಣ, ವಿಧಾನಸೌಧ ಸಿಸಿ ಕ್ಯಾಮರಾ ಎಲ್ಲವನ್ನು ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದರು.

ಈಗಾಗಲೇ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಬಿಜೆಪಿಯವರು ಕೊಟ್ಟಿರುವ ದೂರನ್ನು ಕೂಡ ಸ್ವೀಕರಿಸಿದ್ದೇವೆ. ಸದನ ಒಳಗೆ ಹೊರಗೆ ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆ, ಮಾಡಲಿ. ನಾವು ತಪ್ಪು ಅಂತ ಹೇಳಲ್ಲ. ಕಾನೂನು ಚೌಕಟ್ಟಿನಲ್ಲಿ ಮಾಡಲಿ. ಇದರಲ್ಲಿ ಕಾಂಗ್ರೆಸ್ ತಪ್ಪೇನಿದೆ ? ಮುಸ್ಲಿ‌ಂ ತುಷ್ಠಿಕರಣ ಮಾಡುತ್ತಾರೆ ಅಂತ ಹೇಳುತ್ತಾನೆ ಬಂದಿದ್ದಾರೆ, ಹೋಸದೇನು ಇಲ್ಲ ಎಂದರು.

LEAVE A REPLY

Please enter your comment!
Please enter your name here