ಬೆಂಗಳೂರು: ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಇದೀಗ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸಿದ್ದು, ಸಮಿತಿಗೆ ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಸಮಿತಿ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಕ್ಕೆ ಬರುವಬಗ್ಗೆ ನಿರಂತರ ಮೇಲ್ವಿಚಾರಣೆ ನಡೆಸಲಿದೆ.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಅನುಮೋದನೆ ನೀಡಿದ್ದು, ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ರೇವಣ್ಣ ಅವರನ್ನು ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಸಮಿತಿ ಉಪಾಧ್ಯಕ್ಷರಾಗಿ ಮೆಹರೋಜ್ ಖಾನ್, ಡಾ.ಪುಷ್ಪಾ ಅಮರನಾಥ್, ಎಸ್.ಆರ್.ಪಾಟೀಲ್, ಸೂರಜ್ ಹೆಗ್ಡೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದೇ ವೇಳೆ, 44 ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. ಈ ಪಟ್ಟಿ ಆಯಾ ಇಲಾಖೆಗಳಿಗೆ ರವಾನೆಯಾಗಿದ್ದು, ಗುರುವಾರ ಪ್ರಕಟಗೊಳ್ಳಲಿದೆ