ಬೆಳ್ತಂಗಡಿ; ಕಾಶಿಬೆಟ್ಟುವಿನಲ್ಲಿ ಕಾರು ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಚಿಕ್ಕಮಗಳೂರಿನಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕಾರು ಕಾಶಿಬೆಟ್ಟು ಶನೀಶ್ವರ ದೇವಸ್ಥಾನದ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ.
ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.
ಒಬ್ಬನ ತಲೆಗೆ ಗಂಬೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ ಉಳಿದವರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ
