ಧರ್ಮಸ್ಥಳ; ವಿದ್ಯುತ್ ಶಾಕ್ ಹೊಡೆದು ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ಫೆ.29ರಂದು ನಡೆದಿದೆ.
ಮೃತ ವ್ಯಕ್ತಿ ರಾಯಚೂರು ನಿವಾಸಿಯಾಗಿರುವ ಸಲೀಂ (36) ಎಂಬವರಾಗಿದ್ದಾರೆ.
ಧರ್ಮಸ್ಥಳದಲ್ಲಿ ಕಟ್ಟಡವೊಂದರ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾಂಕ್ರೀಟ್ ವೈಬ್ರೇಟರ್ ಮೆಷಿನ್ ನ ವಯರ್ ನಿಂದ ವಿದ್ಯುತ್ ಪ್ರವಹಿಸಿ ಸಲೀಂ ಗಂಭೀರವಾಗಿ ಗಾಯಗೊಂಡಿದ್ದ ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ