ಮುಂಡಾಜೆ; ಇಲ್ಲಿನ ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಬೆಂಕಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು ಬೆಂಕಿ ನಂದಿಸುವ ಪ್ರಯತ್ನ ಆರಂಭಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದು
ಸ್ಥಳೀಯರ ಹಾಗೂ ಅಗ್ನಿಶಾಮಕ ದಳದ ಸಕಾಲಿಕ ಸ್ಪಂದನೆಯಿಂದ ಹೆಚ್ಚಿನ ಹಾನಿ ಉಂಟಾಗುವುದು ತಪ್ಪಿತು.
ಬೆಂಕಿ ಇನ್ನಷ್ಟು ಹರಡುತ್ತಿದ್ದರೆ ಸಮೀಪದ ಮನೆಗಳಿಗೆ ಹಾಗೂ ತೋಟಗಳಿಗೆ ಹೆಚ್ಚಿನ ಹಾನಿ ಉಂಟಾಗುತ್ತಿತ್ತು.