Home ಅಪರಾಧ ಲೋಕ ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

205
0


ಗದಗ; ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.ನಗರದ ಚನ್ನಮ್ಮ ವೃತ್ತದ ಸಮೀಪ ಇರುವ ದಾಸರ ಓಣಿಯಲ್ಲಿ ಈ ಘಟನೆ ನಡೆದಿದ್ದು, ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ ಬಾಕಳೆ (27), ಕೊಪ್ಪಳದ ಪರುಶುರಾಮ (55), ಲಕ್ಷ್ಮಿ (45) ಮತ್ತು ಆಕಾಂಕ್ಷ (17) ಕೊಲೆಯಾದವರು.

ಸುನಂದ ಬಾಕಳೆ ಪುತ್ರ ಕಾರ್ತಿಕ ಬಾಕಳೆ ಮದುವೆ ನಿಶ್ಚಯ ಕಾರ್ಯಕ್ರಮದ ನಿಮಿತ್ತ ಸಂಬಂಧಿಗಳು ಏ. 17ರಂದು ಮನೆಗೆ ಬಂದಿದ್ದರು. ಏ.18ರಂದು ರಾತ್ರಿ ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ಮಲಗಿದ್ದಾಗ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ನಾಲ್ಕೂ ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ, ಎಸ್ ಪಿ ಬಿಎಸ್ ನೇಮಗೌಡ, ಎಎಸ್ ಪಿ ಎಂ.ಬಿ.ಸಂಕದ, ಡಿವೈಎಸ್ ಪಿ ಇನಾಂದಾರ ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here