ಬೆಳ್ತಂಗಡಿ; ಉಜಿರೆ ನಿವಾಸಿ ಬೆಳ್ತಂಗಡಿ, ಉಜಿರೆ, ಧರ್ಮಸ್ಥಳದಲ್ಲಿ ಮೀರಾ ಲ್ಯಾಬ್ ನಡೆಸುತ್ತಿದ್ದ ಜೋಸೆಫ್ ಮೇಲಾಟ್(63) ಅವರು ಉಜಿರೆಯ ಮನೆಯಲ್ಲಿ ಹೃದಯಾಘಾತದಿಂದ ಶುಕ್ರವಾರ ಬೆಳಿಗ್ಗೆ ನಿನಿಧನರಾದರು. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯದ ಕಾರಣದಿಂದ ಇತ್ತೀಚೆಗೆ ಮನೆಯಲ್ಲಿಯೇ ಇದ್ದರು. ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪತ್ನಿ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದು , ಪತ್ನಿ ಓರ್ವ ಪುತ್ರ , ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮೃತರ ಅಂತ್ಯಸಂಸ್ಕಾರ ಶುಕ್ರವಾರ ಸಂಜೆ 4ಗಂಟೆಗೆ ಉಜಿರೆಯ ಸೈಂಟ್ ಜಾರ್ಜ್ ಚರ್ಚ್ ನಲ್ಲಿ ನಡೆಯಲಿದೆ