ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ ಎ.20ರಂದು ಸಂಜೆ 3.30ಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜು ಬಳಿಯಿಂದ ಶ್ರೀ ಜನಾರ್ದನ ದೇವಸ್ಥಾನದವರೆಗೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಲೋಕಸಭಾದ ಬಿಜೆಪಿ ಅಭ್ಯರ್ಥಿ ಕ್ಯಾ, ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಪ್ರಮುಖರು ಭಾಗವಹಿಸಲಿದ್ದಾರೆ.