ಬೆಳ್ತಂಗಡಿ; ಅಕ್ರಮವಾಗಿ ಮರಳು ಸಂಗ್ರಹಿಸಿ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ವಾಹನವನ್ನು ಹಾಗೂ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಕಕ್ಕಿಂಜೆಯಿಂದ ಚಾರ್ಮಾಡಿ ಕಡೆಗೆ ಆರೋಪಿ ಚಾರ್ಮಾಡಿ ನಿವಾಸಿಯಾಗಿರುವ ಫಯಾಜ್ ಎಂಬಾತ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಮಾಹಿತಿಯ ಮೇರೆಗೆ ಪೊಲೀಸರು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಮರಳನ್ನು ಮೃತ್ಯುಂಜಯ ನದಿಯಿಂದ ತೆಗೆದು ಸಾಗಾಟ ಮಾಡುತ್ತಿರುವುದಾಗಿ ತಿಳಿಸಿದ್ದಾನೆ .ವಾಹನ ಹಾಗೂ ಮರಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ