ಧರ್ಮಸ್ಥಳ: ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ಸು ರಿವರ್ಸ್ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್ ನಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಎ24ಬುಧವಾರ ಮಧ್ಯಾಹ್ನ ನಡೆದಿದೆ.
ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಆಕಸ್ಮಿಕವಾಗಿ ಟಯರ್ ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಿದ್ದು, ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.
