ಬೆಳ್ತಂಗಡಿ; ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ತಾಲೂಕಿನ ಮುಂಡಾಜೆಯ 74 ಮತಗಟ್ಟೆಯಲ್ಲಿ ಮತಯಂತ್ರ ಕೈಕೊಟ್ಟು ವಿಳಂಬವಾಗಿ ಮತದಾನ ಪ್ರಕ್ರಿಯೆ ಆರಂಭಗೊಂಡಿತ್ತು.
ಬೆಳಿಗ್ಗೆ 7ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಬೇಕಾಗಿತ್ತು. ಆರು ಗಂಟೆಯಿಂದಲೇ ಮತದಾರರು ಸರತಿಯ ಸಾಲಿನಲ್ಲಿ ನಿಂತಿದ್ದರು. ಆದರೆ ಏಳು ಗಂಟೆಯ ವೇಳೆ ಮತಯಂತ್ರ ಸರಿಯಿಲ್ಲದ ಕಾರಣ ಮತ ಮತದಾನ ಆರಂಭಿಸಲು ಸಾಧ್ಯವಾಗಲಿಲ್ಲ. ನೂರಾರು ಸಂಖ್ಯೆಯಲ್ಲಿ ಜನರು ಮತಗಟ್ಟೆಯ ಎದುರು ಕಾಯುವಂತಾಯಿತು. 7.30ರ ಬಳಿಕ ಮತಯಂತ್ರವನ್ನು ಸರಿಪಡಿಸಿ ಮತದಾನಕ್ಕೆ ಅವಕಾಶ ಒದಗಿಸಲಾಯಿತು. ಸರತಿಯ ಸಾಲಿನಲ್ಲಿ ನಿಂತು ಕಾಯುತ್ತಿದ್ದ ಮತದಾರರು ಅವ್ಯವಸ್ಥೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿರುವುದು ಕಂಡು ಬಂತು.