Home ಸ್ಥಳೀಯ ಸಮಾಚಾರ ಬೆಳ್ತಂಗಡಿ ಧರ್ಮಪ್ರಾಂತ್ಯ ಕೇಶದಾನ ಕಾರ್ಯಕ್ರಮ:

ಬೆಳ್ತಂಗಡಿ ಧರ್ಮಪ್ರಾಂತ್ಯ ಕೇಶದಾನ ಕಾರ್ಯಕ್ರಮ:

633
0


ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಫ್ಯಾಮಿಲಿ ಅಪೋಸ್ತಲೇಟ್ ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಇವುಗಳ ವತಿಯಿಂದ ಕ್ಯಾನ್ಸರ್ ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಕೇಶದಾನ ಕಾರ್ಯಕ್ರಮವು ಎಪ್ರಿಲ್ 28 ರಂದು ಬೆಳ್ತಂಗಡಿ ಜ್ಞಾನನಿಲಯದಲ್ಲಿ ನಡೆಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ಮಾತೃವೇದಿ ಅಧ್ಯಕ್ಷೆ ಮೇರ್ಸಿ ಕಾಡಶ್ಶೇರಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ‌ ಶುಭ ಹಾರೈಸಿದರು.


ಬೆಳ್ತಂಗಡಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಇದರ ಅಧ್ಯಕ್ಷೆ ಮಂಜುಳಾ ಜೋನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ಎಲ್ಲರಿಗೂ ಸ್ವಾಗತ ಕೋರಿದರು. ಬೆಳ್ತಂಗಡಿ ಧರ್ಮಪ್ರಾಂತ್ಯದ ಫ್ಯಾಮಿಲಿ ಅಪೋಸ್ತಲೇಟ್ ನಿರ್ದೇಶಕರಾದ ವಂದನೀಯ ಫಾ. ತೋಮಸ್ ಪುಲ್ಲಾಟ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕೇಶದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯಕ್ರಮ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಕಾರ್ಯಕ್ರಮ ನಿರೂಪಿಸಿದರು.

ಮುಂಡಾಜೆಯ ಬ್ಯೂಟಿಷಿಯನ್ ಜಿನ್ಸಿ ರಾಜೇಶ್ ಕೇಶ ತೆಗೆಯಲು ಸಹಕರಿಸಿದರು. ಒಟ್ಟು 20 ಮಂದಿ ಕೇಶದಾನ ಮಾಡಿದರು. ಕೇಶದಾನ ಮಾಡಿದ ಎಲ್ಲರಿಗೂ ಪ್ರಮಾಣ ಪತ್ರ ವಿತರಿಸಲಾಯಿತು.

LEAVE A REPLY

Please enter your comment!
Please enter your name here