Home ಸ್ಥಳೀಯ ಸಮಾಚಾರ ಮೇ 1 ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ

ಮೇ 1 ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ

0
May 1 52nd Annual Free Mass Marriage Ceremony at Dharmasthala


ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮೇ ಒಂದರಂದು ಬುಧವಾರ ಸಂಜೆ ಗಂಟೆ 6.45 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ.
ಈಗಾಗಲೆ 123 ಜೊತೆ ವಧು-ವರರು ವಿವಾಹಕ್ಕೆ ಹೆಸರು ನೋಂದಾಯಿಸಿದ್ದು ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲಿದ್ದಾರೆ
ವರನಿಗೆ ಧೋತಿ, ಶಾಲು ಹಾಗೂ ವಧುವಿಗೆ ಸೀರೆ, ರವಿಕೆ ಮತ್ತು ಮಂಗಳಸೂತ್ರವನ್ನು ನೀಡಲಾಗುವುದು.
ಬುಧವಾರ ಬೆಳಿಗ್ಯೆಯಿಂದಲೆ ಧರ್ಮಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಧು-ವರರಿಗೆ ಸೀರೆ, ರವಿಕೆಕಣ, ಧೋತಿ ಮತ್ತು ಶಾಲು ವಿತರಿಸುವರು.


ಸಂಜೆ 5 ಗಂಟೆಗೆ ವಧೂ-ವರರು ಭವ್ಯ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ಬರಲಿದ್ದರೆ.
ಅಲ್ಲಿ ಅವರವರ ಜಾತಿಸಂಪ್ರದಾಯದಂತೆ ಒಂದೇ ಮುಹೂರ್ತದಲ್ಲಿ ಸಾಮೂಹಿಕ ವಿವಾಹ ನಡೆಯುತ್ತದೆ.
ಸಾಮೂಹಿಕ ವಿವಾಹದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಚಲನಚಿತ್ರನಟ ದೊಡ್ಡಣ್ಣ ಶುಭಾಶಂಸನೆ ಮಾಡುವರು.
ನೂತನ ದಂಪತಿಗಳು ಪ್ರತಿಜ್ಞೆ ಮಾಡಿ ದಾಂಪತ್ಯ ಜೀವನವನ್ನು ಪ್ರವೇಶಿಸಲಿದ್ದಾರೆ.
ಸಾಮೂಹಿಕ ವಿವಾಹದಲ್ಲಿ ಮದುವೆ ಆದವರಿಗೆ ಸರ್ಕಾರದ ವತಿಯಿಂದ ವಿವಾಹ ನೋಂದಣಿ ಪ್ರಮಾಣ ಪತ್ರ ನೀಡಲಾಗುವುದು.
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ 1972 ರಲ್ಲಿ ಉಚಿತ ಸಾಮೂಹಿಕ ವಿವಾಹ ಆರಂಭಿಸಿದ್ದು, ಪ್ರತಿ ವರ್ಷ ಇದನ್ನು ನಡೆಸಲಾಗುತ್ತದೆ. ಕಳೆದ ವರ್ಷದ ವರೆಗೆ 12,777 ಜೊತೆ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ದಾಂಪತ್ಯಜೀವನ ನಡೆಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version