ಬೆಳ್ತಂಗಡಿ; ಬೆಳಾಲು ಉಜಿರೆ ರಸ್ತೆಯಲ್ಲಿ ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಇಂದು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದೆ. ಆದರೆ ಬೈಕಿನಲ್ಲಿದ್ದವರು ಪವಾಡಸದೃಶ್ಯವಾಗಿ ಅಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ಅಪಘಾತದ ವೇಳೆ ಬೈಕ್ ಸವಾರ ಬೈಕಿನಿಂದ ಎಸೆಯಲ್ಪಟ್ಟಿದ್ದು ರಸ್ತೆಬದಿಗೆ ಬಿದ್ದಿದ್ದಾರೆ. ಆದರೆ ಯಾವುದೇ ಹೆಚ್ಚಿನ ಗಾಯಗಳಾಗಿಲ್ಲ. ಕಾರಿಗೂ ಹಾನಿಯಾಗಿದ್ದು ಕಾರಿನಲ್ಲಿದ್ದವರೂ ಅಪಾಯದಿಂದ ಪಾರಾಗಿದ್ದಾರೆ.