Home ಅಪರಾಧ ಲೋಕ ಆರು ವಿಧಾನಪರಿಷತ್ ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ

ಆರು ವಿಧಾನಪರಿಷತ್ ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ

146
0

ಬೆಂಗಳೂರು : ರಾಜ್ಯ ವಿಧಾನಪರಿಷತ್‌ನ 6 ಸ್ಥಾನಗಳಿಗೆ ಆಯೋಗವು ಚುನಾವಣೆಯನ್ನು ಘೋಷಣೆ ಮಾಡಿದ್ದು, 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.

ನಾಮಪತ್ರ ಸಲ್ಲಿಕೆಗೆ ಮೇ.16 ಕೊನೆಯ ದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಮೇ.20 ಕೊನೆಯ ದಿನವಾಗಿದೆ.

ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ, ಆಗ್ನಿಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.

LEAVE A REPLY

Please enter your comment!
Please enter your name here