ಬೆಳ್ತಂಗಡಿ; ರಾಹುಲ್ ಗಾಂಧಿ ಅವರು ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಮೂಲಕ ಉತ್ತರಪ್ರದೇಶ ಚುನಾವಣೆಯಲ್ಲಿ ಹೊಸ ಉತ್ಸಾಹ ಮೂಡಿಸಿದ್ದಾರೆ.
ಗಾಂಧೀ ಕುಟುಂಬದ ಕ್ಷೇತ್ರವಾಗಿದ್ದ ರಾಯ್ ಬರೇಲಿಯನ್ನು ಈ ಹಿಂದೆ ಸೋನಿಯಾ ಗಾಂಧಿಯವರು ಪ್ರತಿನಿಧಿಸಿದ್ದರು. ಕಳೆದ ಚುನಾವಣೆಯಲ್ಲಿ ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡಿತ್ತು.
ಕಳೆದ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಕ್ಷೇತ್ರದಿಂದ ಸಂಸದರಾಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ವಯನಾಡ್ ಕ್ಷೇತ್ರದಲ್ಲಿ ಕಣಕ್ಕೆ ಇಳಿದಿದ್ದರು. ಇದೀಗ ರಾಹುಲ್ ಅವರು ಎರಡನೆಯ ಕ್ಷೇತ್ರವಾಗಿ ರಾಯ್ ಬರೇಲಿಯಲ್ಲಿಯೂ ಕಣಕ್ಕೆ ಇಳಿಯಲಿದ್ದಾರೆ ಎಂದು ಕಾಂಗ್ರೆಸ್ ಪ್ರಕಟಿಸಿದೆ. ಇಂದು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದ್ದು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ರಾಹುಲ್ ಗಾಂಧಿಯವರು ದಕ್ಷಿಣಕ್ಕೆ ಪಲಾಯನ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರುಗಳ ಆರೋಪದ ನಡುವೆಯೇ ಇದೀಗ ಅವರು ರಾಯ್ ಬರೇಲಿಯಲ್ಲಿ ಕಣಕ್ಕೆ ಇಳಿಯುವ ಮೂಲಕ ಕಾರ್ಯಕರ್ತರಲ್ಲಿ ಧೈರ್ಯ ತುಂಬುವ ಕಾರ್ಯ ಮಾಡಿದ್ದಾರೆ.
ಮತ್ತೊಂದೆಡೆ ರಾಹುಲ್ ಅವರು ಈ ಹಿಂದೆ ಪ್ರತಿನಿಧಿಸಿದ್ದ ಅಮೇಥಿ ಕ್ಷೇತ್ರದಲ್ಲಿ ಕಾಂಗ್ರಸ್ ಮುಖಂಡ ಕಿಶೋರ್ ಲಾಲ್ ಶರ್ಮಾ ಅವರ ಹೆಸರನ್ನು ಅಂತಿಮ ಗೊಳೊಸಿದ್ದು ಅಧಿಕೃತವಾಗಿ ಪ್ರಕಟಿಸಿದೆ.