ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಹಕವು ವಾಹನಗಳು ಜಖಂಗೊಂಡಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ರಿಕ್ಷವೊಂದು ಮಗುಚಿ ಬಿದ್ದಾಗ ಅದರ ಹಿಂದೆ ಬರುತ್ತಿದ್ದ ರಿಕ್ಷಾ ಹಾಗೂ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದೆ. ಎರಡು ರಿಕ್ಷಾಗಳು ಹಾಗೂ ಮೂರು ಕಾರುಗಳು ಜಖಂಗೊಂಡಿದೆ. ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಉಳಿದಂತೆ ಯಾರಿಗೂ ಯಾವಯದೇ ಗಾಯಗಳಾಗಿಲ್ಲ.
ಸೋಮವಾರ ನಾಲ್ಕು ಗಂಟೆಯ ಸುಮಾರಿಗೆನೇತ್ರಾವತಿಯಿಂದ ಧರ್ಮಸ್ಥಳ ಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ಅದರ ಹಿಂದೆ ಇದ್ದ ರಿಕ್ಷಾವೊಂದು ಅಪಘಾತ ಸಂಭವಿಸಿದ ರಿಕ್ಷಾಕ್ಕೆ ತಾಗಿ ಜಖಂಗೊಂಡಿದೆ ವೇಗವಾಗಿ ಬರುತ್ತಿದ್ದ ಕಾರು ಮಗುಚಿ ಬಿದ್ದ ರಿಕ್ಷಾಕ್ಕೆ ಡಿಕ್ಕಿಹೊಡೆದಿದೆ ಅದರ ಹಿಂದಿನಿಂದ ಬರುತ್ತಿದ್ದ ಎರಡು ಕಾರುಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿದೆ.
ಎಲ್ಲ ಕಾರುಗಳು ಜಖಂಗೊಂಡಿದೆ.