ಬೆಳ್ತಂಗಡಿ; ನಗರದ ವಾಣಿ ಕಾಲೇಜಿನ ಮುಂಭಾಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ತೆರೆಯಲಾಗಿದ್ದ ಹೊಂಡಕ್ಕೆ ಬಿದ್ದ ಘಟನೆ ಸಂಭವಿಸಿದೆ.
ಸೋಮವಾರ ಸಂಜೆ ವಾಹನವೊಂದನ್ನು ಓವರ್ ಟೇಕ್ ಮಾಡುವ ವೇಳೆ ಕಾರು ರಸ್ತೆ ಬದಿಗೆ ಚಲಿಸಿ ರಸ್ತೆ ಕಾಮಗಾರಿಗಾಗಿ ನಿರ್ಮಿಸಲಾಗಿದ್ದ ಹೊಂಡಕ್ಕೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಬೆಂಗಳೂರು ನಿವಾಸಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.