ಬೆಂಗಳೂರು; ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ನಡೆಯುತ್ತಿದ್ದು, ‘ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ 120 ಮಹಿಳೆಯರು ಸೇರಿದಂತೆ 1,300ಕ್ಕೂ ಅಧಿಕ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಗೃಹ ಸಚಿವ ಅಮಿತ್ ಶಾ (ಗಾಂಧಿನಗರ) ಮತ್ತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (ಗುನಾ) ಸೇರಿದಂತೆ ಹಲವು ಪ್ರಮುಖರ ಭವಿಷ್ಯ ನಿರ್ಧಾರವಾಗಲಿದೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾನ್ ಮತ್ತು ದಿಗ್ವಿಜಯ್ ಸಿಂಗ್ ಅವರು ಇದೇ ಮೊದಲ ಬಾರಿ ಲೋಕಸಭಾ ಚುನಾವಣೆಗೆ ಕಣಕ್ಕಿಳಿದಿದ್ದಾರೆ.
ಕರ್ನಾಟಕದ 14 ಲೋಕ ಸಭಾ ಕ್ಷೇತ್ರಗಳಲ್ಲಿಯೂ ಮತದಾನ ಪ್ರಕ್ರಿಯೆ ಆರಂಭ ಗೊಂಡಿದೆ ಎಲ್ಲ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಹೋರಾಟ ನಡೆಯುತ್ತಿದೆ.