Home ಬ್ರೇಕಿಂಗ್‌ ನ್ಯೂಸ್ ಮುಷ್ಕರದಿಂದ ಹಿಂದೆ ಸರಿದ 108 ಸಿಬ್ಬಂದಿಗಳು

ಮುಷ್ಕರದಿಂದ ಹಿಂದೆ ಸರಿದ 108 ಸಿಬ್ಬಂದಿಗಳು

0

ಬೆಂಗಳೂರು: ಬಾಕಿ ವೇತನ ಪಾವತಿಗೆ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ108 ಆರೋಗ್ಯ ಕವಚ’ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಬುಲೆನ್ಸ್‌ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ವಾಪಸ್ ಪಡೆದಿದ್ದಾರೆ.
ಆರೋಗ್ಯ ಸಚಿವರು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವ ಕಾರಣ ಮುಷ್ಕರ ಹಿಂಪಡೆಯಲಾಗಿದೆ ಎಂದು ‘108 ಆರೋಗ್ಯ ಕವಚ’ ನೌಕರರ ಸಂಘದ ರಾಜ್ಯಾಧ್ಯಕ್ಷ ಪರಮಶಿವ ತಿಳಿಸಿದ್ದಾರೆ.

ಸೋಮವಾರ ರಾತ್ರಿಯಿಂದ ಮುಷ್ಕರ ನಡೆಸಲು ಮೊದಲು ನಿರ್ಧರಿಸಿದ್ದರು. ಪ್ರಮುಖ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ಹೊರ ರಾಜ್ಯಗಳಲ್ಲಿದ್ದು, ಮಂಗಳವಾರ ಬೆಂಗಳೂರಿಗೆ ಬರಲಿದ್ದಾರೆ ಎಂಬ ಕಾರಣದಿಂದ ಮಂಗಳವಾರಕ್ಕೆ ಮುಷ್ಕರವನ್ನು ಮುಂದೂಡಲಾಗಿತ್ತು. ಮಂಗಳವಾರ ಆರೋಗ್ಯ ಸಚಿವರು ಮಾತುಕತೆ ನಡೆಸಿದ್ದರಿಂದ ಮುಷ್ಕರ ಕೈಬಿಡಲಾಯಿತು ಎಂದು ಮಾಹಿತಿ ನೀಡಿದರು.

‘ಸರ್ಕಾರದ ಬಳಿ ಹಣಕಾಸಿನ ಕೊರತೆಯಿಲ್ಲ. 108 ಅಂಬ್ಯುಲೆನ್ಸ್ ಸಿಬ್ಬಂದಿಗೆ ನೀಡಬೇಕಾದ ವೇತನವನ್ನು ನಿಯಮಾನುಸಾರ ಪಾವತಿಸಲಾಗಿದೆ. ಯೋಜನೆಯನ್ನು ಜಿವಿಕೆ ಇಎಂಆರ್ ಸಂಸ್ಥೆ ನಿರ್ವಹಿಸುತ್ತಿದ್ದು, ಅವರು ಸಿಬ್ಬಂದಿಗೆ ವೇತನವನ್ನು ಪಾವತಿ ಮಾಡಬೇಕು. ಅಧಿಕಾರಿಗಳು ಮತ್ತು ಜಿವಿಕೆ ಇಎಂಆ‌ರ್ ಏಜೆನ್ಸಿಯೊಂದಿಗೆ ಮಂಗಳವಾರ ಚರ್ಚೆ ನಡೆಸಲಾಯಿತು. ಸರ್ಕಾರದಿಂದ ಯಾವುದೇ ಹಣ ಬಾಕಿ ಇಲ್ಲ. ಏಜೆನ್ಸಿಯಿಂದ ವ್ಯತ್ಯಾಸವಾಗಿದ್ದರೆ ಸರಿಪಡಿಸಬೇಕು. ಉಳಿದ ಬೇಡಿಕೆಗಳನ್ನು ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಚರ್ಚಿಸಿ ಬಗೆಹರಿಸಲಾಗುವುದು ಎಂದು 108 ಆಂಬುಲೆನ್ಸ್ ಸಿಬ್ಬಂದಿಗೆ ಮನವರಿಕೆ ಮಾಡಿದ್ದರಿಂದ ಅವರು ಮುಷ್ಕರ ವಾಪಸ್‌ ಪಡೆದಿದ್ದಾರೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version