ಬೆಳ್ತಂಗಡಿ; ಕುದ್ಯಾಡಿ ಗ್ರಾಮದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ಚಿನ್ನಾಭರಣ ಹಾಗೂ ನಗದನ್ನು ಅಪಹರಿಸಿದ ಘಟನೆ ಸಂಭವಿಸಿದೆ.
ಇಲ್ಲಿನ ನಿವಾಸಿ ನೀತಾ ಎಂಬವರ ಮನೆಯಲ್ಲಿಯೇ ಕಳ್ಳತನ ನಡೆದಿದೆ. ಇವರು ಮೇ 11ರಂದು ಮನೆಯ ಬೀಗ ಹಾಕಿ ತವರನೆಗೆ ತೆರಳಿದ್ದರು. ಸೋಮವಾರ ಮದ್ಯಾಹ್ನ ಸಮೀಪದ ಮನೆಯವರು ನೋಡಿದಾಗ ಮನೆಯ ಬಾಗಿಲು ತೆರೆದಿರುವುದನ್ನು ನೋಡಿ ನೀತಾ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು ಗೋಡ್ರೇಜ್ ಬೀಗ ಮುರಿದು ಅದರಲ್ಲಿ ಇರಿಸಲಾಗಿದ್ದ 1,98,000ಮೌಲ್ಯದ 33 ಗ್ರಾಂ ಚಿನ್ನಾಭರಣಗಳನ್ನು ಹಾಗೂ ಅಲ್ಲಿ ಇರಿಸಲಾಗಿದ್ದ 49 ಸಾವಿರ ನಗದನ್ನು ಕಳ್ಳತನ ಮಾಡಿರುವುದು ಕಂಡು ಬಂದಿದೆ ಈ ಬಗ್ಗೆ ವೇಣೂರು ಪೊಲೀಸರಿಗೆ ದೂರು ನೀಡಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ