Home ಅಪರಾಧ ಲೋಕ ಹುಬ್ಬಳ್ಳಿ, ಮನೆಯಲ್ಲಿ ಮಲಗಿದ್ದ ಯುವತಿಯನ್ನು ಇರಿದು ಕೊಂದ ರಿಕ್ಷಾ ಚಾಲಕ

ಹುಬ್ಬಳ್ಳಿ, ಮನೆಯಲ್ಲಿ ಮಲಗಿದ್ದ ಯುವತಿಯನ್ನು ಇರಿದು ಕೊಂದ ರಿಕ್ಷಾ ಚಾಲಕ

155
0

ಹುಬ್ಬಳ್ಳಿ: ಮನೆಯಲ್ಲಿ ಮಲಗಿದ್ದ ಯುವತಿಗೆ ಯುವಕನೊಬ್ಬ ಚಾಕು ಇರಿದು ಕೊಲೆ ಮಾಡಿ ಪರಾರಿಯಾದ ಪ್ರಕರಣ ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಬುಧವಾರ ನಡೆದಿದೆ.
ಅಂಜಲಿ ಅಂಬಿಗೇರ(19) ಮೃತಪಟ್ಟ ಯುವತಿ. ವೀರಾಪುರ ಓಣಿಯ ಮೂರನೇ ಕ್ರಾಸ್ ನಿವಾಸಿ, ಆಟೊ ಚಾಲಕ ಗಿರೀಶ ಸಾವಂತ ಕೊಲೆ ಮಾಡಿದ ಆರೋಪಿ. ಬೆಂಡಿಗೇರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

‘ಪರಸ್ಪರ ಪ್ರೀತಿಸುತ್ತಿದ್ದ ಅಂಜಲಿ ಮತ್ತು ಗಿರೀಶ ನಡುವೆ ವೈಮನಸ್ಸು ಮೂಡಿತ್ತು ಎನ್ನಲಾಗಿದೆ. ಇದರಿಂದ ಕೋಪಗೊಂಡ ಗಿರೀಶ್, ಬುಧವಾರ ಬೆಳಗಿನ ಜಾವ 5ಗಂಟೆಗೆ ಅಂಜಲಿ ಮನೆಗೆ ಹೋಗಿ ಬಾಗಿಲು ಬಡಿದಿದ್ದಾನೆ. ಯಾರೂ ಬಾಗಿಲು ತೆರೆಯದಿದ್ದಾಗ, ಮತ್ತೊಮ್ಮೆ ಜೋರಾಗಿ ಬಾಗಿಲು ಬಡಿದಿದ್ದಾನೆ. ಅಂಜಲಿ ಸಹೋದರಿ ಬಾಗಿಲು ತೆರದಿದ್ದರು. ಏಕಾಏಕಿ ಒಳಗೆ ನುಗ್ಗಿದ ಗಿರೀಶ, ನಿದ್ದೆಯಲ್ಲಿದ್ದ ಅಂಜಲಿಯ ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಚಾಕು ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾಳೆ’ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here