Home ಸ್ಥಳೀಯ ಸಮಾಚಾರ ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಹವಾಮಾನ ಬದಲಾವಣೆ ಬಗ್ಗೆ ತರಬೇತಿ...

ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಹವಾಮಾನ ಬದಲಾವಣೆ ಬಗ್ಗೆ ತರಬೇತಿ ಕಾರ್ಯಾಗಾರ

213
0

ಬೆಳ್ತಂಗಡಿ; ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ ಇದರ ನೇತೃತ್ವದಲ್ಲಿ , ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು ಹಾಗೂ ಸಂಪದ ಉಡುಪಿ ಸಹಕಾರದಿಂದ ಕ್ಲಸ್ಟರ್ ಮಟ್ಟದ ಹವಾಮಾನ ಬದಲಾವಣೆ ಕುರಿತು ತರಬೇತಿ ಕಾರ್ಯಕ್ರಮವನ್ನು ದಿನಾಂಕ 15.05.2024 ರಂದು ಆಯೋಜಿಸಿಲಾಗಿತ್ತು. ಹವಾಮಾನ ಬದಲಾವಣೆಯು ಇತ್ತೀಚೆಗೆ ನಮ್ಮನ್ನು ಕಾಡುತ್ತಿರುವ ಅತೀ ದೊಡ್ಡ ಸಮಸ್ಯೆ, ಇದರ ಬಗ್ಗೆ ಅರಿವು ಪಡೆಯುವುದು ಅತ್ಯಗತ್ಯ ಎಂದು ಉದ್ಘಾಟನೆಯನ್ನು ನೆರವೇರಿಸಿದ ಕ್ರಾಸ್ ಸಂಸ್ಥೆ ಬೆಂಗಳೂರು ಇದರ ರಾಜ್ಯ ಸಂಯೋಜಕಿ ಲೈನಾ ಲಸ್ರಾದೊ ರವರು ತಿಳಿಸಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾನಿನಿ ಮಹಿಳಾ ರಾಜ್ಯ ಒಕ್ಕೂಟದ ಅಧ್ಯಕ್ಷೆ ಮಂಜುಳಾ ರವರು ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ವನ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಪರಿಸರ ಸಂರಕ್ಷಣೆ ಅಧಿಕಾರಿ ಭುವನ್ ಹಾಗೂ ಸದಸ್ಯರಾದ ಗಣೇಶ್ ರವರು ಹವಾಮಾನ ಬದಲಾವಣೆ ಮತ್ತು ತ್ಯಾಜ್ಯ ನಿರ್ವಹಣೆ ಬಗ್ಗೆ ತರಬೇತಿ ನೀಡಿದರು. ಸಿ.ಒ.ಡಿ.ಪಿ, ಕಿಡ್ಸ್ ಮತ್ತು ಸಂಪದ ಸಂಸ್ಥೆಯ ಒಕ್ಕೂಟ ಪ್ರತಿನಿಧಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಿ.ಒ.ಡಿ.ಪಿ ಸಂಸ್ಥೆಯ ಸಿಬ್ಬಂದಿಗಳು ಪ್ರಾರ್ಥನೆ ಗೀತೆ ಹಾಡಿದರು. ಡಿ.ಕೆ.ಆರ್.ಡಿ.ಎಸ್ ಕಾರ್ಯಕರ್ತೆ ಸುಶೀಲಾ ಸ್ವಾಗತಿಸಿದರು. ಮಾರ್ಕ್ ಡಿ ಸೋಜ ವಂದಿಸಿದರು. ಸಂಯೋಜಕಿ ಸಿಸಿಲ್ಯಾ ತಾವ್ರೊ ಕಾರ್ಯಕ್ರಮ ನಿರೂಪಿಸಿದರು. ಒಟ್ಟು 42 ಮಂದಿ ಭಾಗವಹಿಸಿದರು.

LEAVE A REPLY

Please enter your comment!
Please enter your name here