
ಬೆಳ್ತಂಗಡಿ; ಬುಧವಾರ ಸಂಜೆ ಬೆಳ್ತಂಗಡಿ ತಾಲೂಕಿನ ಬಹುತೇಕ ಕಡೆಗಳಲ್ಲಿ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಮಳೆ ಸುರಿದಿದೆ.
ಮಾಚಾರಿನಲ್ಲಿ ಸಿಡಿಲು ಬಡಿದು ಮನೆಯೊಂದಕ್ಕೆ ಹಾನಿ ಸಂಭವಿಸಿದೆ.
ಮಾಚಾರು ನಿವಾಸಿ ಬಾಬು ಮುಗೇರ ಎಂಬವರ ಮನೆಗೆ ಸಿಡಿಲು ಬಡಿದಿದ್ದು ಮನೆಯ ಮೀಟರ್ ಬೀರ್ಡ್, ವಿದ್ಯುತ್ ಉಪಕರಣಗಳು, ಹಾಗೂ ಮನೆಯ ಗೋಡೆ ಹಾಗೂ ಶೀಟ್ ಗಳಿಗೂ ಹಾನಿ ಸಂಭವಿಸಿದೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
