ಬೆಳ್ತಂಗಡಿ; ಉಜಿರೆಯಲ್ಲಿ ಸೈಕಲ್ ಸವಾರನಿಗೆ ಕಾರು ಡಿಕ್ಕಿಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.
ಉಜಿರೆ ನಿವಾಸಿ ರಘುರಾಮ ಶೆಟ್ಟಿ ಎಂಬವರೇ ಗಾಯಗೊಂಡವರಾಗಿದ್ದಾರೆ.
ಉಜಿರೆ ಎಸ್.ಡಿ.ಎಂ ಕಾಲೇಜಿನ ಬಳಿ ಕೆ.ಎ 14p 8594 ಕಾರನ್ನು ಅದರ ಚಾಲಕ ರಾಮ ಮೂರ್ತಿ ಎಂಬಾತ ದುಡುಕುತನದಿಂದ ಚಲಾಯಿಸಿ ಮುಂದಿನಿಂದ ಹೋಗುತ್ತಿದ್ದ ರಘುರಾಮ ಶೆಟ್ಟಿ ಅವರು ಚಲಾಯಿಸುತ್ತಿದ್ದ ಸೈಕಲ್ ಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ರಘುರಾಮ ಶೆಟ್ಟಿ ಅವರು ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಖಲಿಸಲಾಗಿದೆ.