ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ಮೇ 15ರಂದು ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಜಿರೆ ಎಸ್.ಡಿ.ಎಂ ಪಿ.ಜಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಧರ್ಮಸ್ಥಳ ಸಾಕೇತ ವಸತಿ ಗೃಹದ ಬಳಿ ಹೋಂಡಾ ಶೈನ್ ಕೆ.ಎ 21 L1747 ಬೈಕ್ ನಿಲ್ಲಿಸಿ ವಸತಿ ಗೃಹದಲ್ಲಿದ್ದ ತಮ್ಮ ಮನೆಯವರನ್ನು ಭೇಟಿಯಾಗಿ ಹಿಂತಿರುಗಿ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಬೈಕಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭಿಸದ ಹಿನ್ನಲೆಯಲ್ಲಿ ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.