ಹೊಸದಿಲ್ಲಿ: ಈಶಾನ್ಯ ದಿಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಕನ್ನಯ್ಯ ಕುಮಾರ್, ಶುಕ್ರವಾರ ತಮ್ಮ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುವಾಗ ಅವರ ಮೇಲೆ ಹಲ್ಲೆ ನಡೆದಿದೆ. ಮಾಲಾರ್ಪಣೆ ಮಾಡುವ ನೆಪದಲ್ಲಿ ಅವರನ್ನು ಸಮೀಪಿಸಿರುವ ಕೆಲವು ದುಷ್ಕರ್ಮಿಗಳು, ನಂತರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದೆ.
ದುಷ್ಕರ್ಮಿಗಳು ಆಮ್ ಆದ್ಮಪಕ್ಷದ ಮಹಿಳಾ ಕೌನ್ಸಿಲರ್ ಛಾಯಾ ಗೌರವ್ ಶರ್ಮ ಅವರೊಂದಿಗೂ ಅನುಚಿತವಾಗಿ ವರ್ತಿಸಿದ್ದಾರೆ. ಈ ಘಟನೆಯ ಕುರಿತು ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಕನ್ನಯ್ಯ ಕುಮಾರ್ ಅವರು ಬಿಜೆಪಿ ಅಭ್ಯರ್ಥಿ ಮನೋಜ್ ತಿವಾರಿ ವಿರುದ್ದ ಈಶಾನ್ಯ ದಿಲ್ಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ