ಬೆಳ್ತಂಗಡಿ; ತೆಂಕಕಾರಂದೂರು ಗ್ರಾಮದ ಗುಂಡೇರಿ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.
ಹುಬ್ಬಳ್ಳಿ ಮೂಲದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಗೆ ಚಲಿಸಿ ಬರೆಗೆ ಡಿಕ್ಕಿಹೊಡೆದು ಪಲ್ಟಿಯಾಗಿದೆ.
ಕಾರಿನಲ್ಲಿ ಐದು ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಕಾರಿನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ . ಕಾರನಲ್ಕಿದ್ದ ಇತರ ಎಲ್ಲರಿಗೂ ಗಾಯಗಳಾಗಿದ್ದು ಸ್ಥಳೀಯರ ಸಹಕಾರದೊಂದಿಗೆ ಎಲ್ಲರನ್ನೂ ಆಸ್ಪತ್ರೆ ದಾಖಲಿಸಲಾಗಿದೆ. ಅಪಘಾತ್ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ