Home ಅಪರಾಧ ಲೋಕ ಅಕ್ರಮ ಕಲ್ಲು ಗಣಿಗಾರಿಕೆ ಯುವಮೋರ್ಚಾ ಮುಖಂಡ ಪ್ರಮೋದ್ ಹಾಗೂ ಶಶಿರಾಜ್ ಶೆಟ್ಟಿ ವಿರುದ್ದ ಪ್ರಕರಣ ದಾಖಲು

ಅಕ್ರಮ ಕಲ್ಲು ಗಣಿಗಾರಿಕೆ ಯುವಮೋರ್ಚಾ ಮುಖಂಡ ಪ್ರಮೋದ್ ಹಾಗೂ ಶಶಿರಾಜ್ ಶೆಟ್ಟಿ ವಿರುದ್ದ ಪ್ರಕರಣ ದಾಖಲು

0

ಬೆಳ್ತಂಗಡಿ; ತಾಲೂಕಿನಲ್ಲಿ ವಿವಾದಕ್ಕೆ ಕಾರಣವಾಗಿರುವ ಮೇಲಂತಬೆಟ್ಟು ಗ್ರಾಮದ ಮೂಡಲ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ಪೊಲೀಸರ ಸಹಕಾರದೊಂದಿಗೆ ನಡೆದ ದಾಳಿಯ ಸಂದರ್ಭದಲ್ಲಿ ಸ್ಥಳದಿಂದ ಸ್ಪೋಟಕಗಳು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆಯುವ ಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಹಾಗೂ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಮೋದ್ ಅವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಸ್ಥಳದಿಂದ ಅಕ್ರಮ ಗಾಣಿಗಾರಿಕೆಯಿಂದ ತೆಗೆದಿರುವ ಕಲ್ಲುಗಳ ರಾಶಿ, ಹಿಟಾಚಿ-1, ಟ್ರಾಕ್ಟರ್‌-1, ಮದ್ದುಗುಂಡು ಜೀವಂತ 4 ಹಾಗೂ ಬಳಕೆಯಾಗಿರುವ 4 ಮದ್ದುಗುಂಡು ಪತ್ತೆಯಾಗಿದ್ದು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಸ್ಥಳದಲ್ಲಿದ್ದ ಕಾರ್ಮಿಕರನ್ನು ವಿಚಾರಣೆ ನಡೆಸುವ ವೇಳೆ ಅಕ್ರಮ ಗಣಿಗಾರಿಕೆಯನ್ನು, ಆರೋಪಿಗಳಾದ ಪ್ರಮೋದ್‌ ಉಜಿರೆ ಹಾಗೂ ಶಶಿರಾಜ್‌ ಎಂಬವರುಗಳು ನಡೆಸುತ್ತಿರುವುದಾಗಿ ತಿಸಿದ್ದು ಅದರಂತೆ ಬೆಳ್ತಂಗಡಿ ತಹಶೀಲ್ದಾರ್ ಅವರು ನೀಡಿರುವ ದೂರಿನಂತೆ ಅವರಿಬ್ಬರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಸ್ಥಳದಲ್ಲಿದ್ದ ಸ್ಪೋಟಕಗಳನ್ನು ಹಾಗು ಇತರೆ ಸೊತ್ತುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಆರೋಪಿಗಳಾದ ಪ್ರಮೋದ್‌ ಉಜಿರೆ ಹಾಗೂ ಶಶಿರಾಜ್‌ ಎಂಬವರುಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ, ಅ.ಕ್ರ: 56/2024, ಕಲಂ: 9B(1)(b) Explosive act 1884 ಕಲಂ 5 The Explosives Substance Act-1908 ರಂತೆ ಪ್ರಕರಣ ದಾಖಲಿಸಿ ಕೊಳ್ಳಲಾಗಿರುತ್ತದೆ.

ಆರೋಪಿಗಳ ಪೈಕಿ ಶಶಿರಾಜ್‌ ಎಂಬಾತನನ್ನುವಪೊಲೀಸರು ವಶಕ್ಕೆ ಪಡೆದಿದ್ದು ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿ ಪ್ರಮೋದ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version